ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಬೆಂಗಳೂರು ಸೇರಿ ರಾಜ್ಯದ ಎಂಟು ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಎಸ್ಪಿ ಸ್ನೇಹಾ ನೇತೃತ್ವದಲ್ಲಿ ಬಸವನಗುಡಿಯ ಜಿಲ್ಲಾ ರಿಜಿಸ್ಟ್ರಾರ್ ಶ್ರೀದೇವಿ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಶೋಧ ನಡೆದಿದೆ. ಬೀದರ್ನಲ್ಲಿ ಮಾಣೀಕ್ ಶೆರಿಕಾರ್ ಅವರಿಗೆ ಸಂಬಂಧಿಸಿದ ಮೂರು ಸ್ಥಳಗಳಲ್ಲಿ ದಾಳಿ ನಡೆದಿದ್ದು, ಹೆಸ್ಕಾಂ ಎಇಇ ನಿವಾಸದಲ್ಲಿ ಚಿನ್ನಾಭರಣ, ಬೆಳ್ಳಿ ಹಾಗೂ ನಗದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ರಾಜ್ಯದ 8 ಕಡೆ ಲೋಕಾಯುಕ್ತ ದಾಳಿ: ಅಕ್ರಮ ಆಸ್ತಿ ಆರೋಪ
Source: Kannada Dunia