ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ IX 1236 ವಿಮಾನ ರನ್‌ವೇಯಲ್ಲಿ ಚಲಿಸುತ್ತಿದ್ದ ವೇಳೆ ಪ್ರಯಾಣಿಕರು ಸೀಟುಗಳಿಂದ ಎದ್ದು ಲಗೇಜ್‌ಗಾಗಿ ಸಾಲಿನಲ್ಲಿ ನಿಂತ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಯಾಣಿಕ ಅಮಿತಾವ ದಾಸ್ ಹಂಚಿಕೊಂಡ ಈ ದೃಶ್ಯ ಸುರಕ್ಷತಾ ಲೋಪದ ಬಗ್ಗೆ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರಯಾಣಿಕರ ಸುರಕ್ಷತೆಯೇ ಪ್ರಮುಖ ಆದ್ಯತೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸ್ಪಷ್ಟನೆ ನೀಡಿದೆ.
ರನ್‌ವೇಯಲ್ಲಿ ಚಲಿಸುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರ ಎದ್ದುನಿಂತ ವಿಡಿಯೊ ವೈರಲ್
Source: Vishwavani