ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಹೈಕೋರ್ಟ್‌ನಲ್ಲಿ ಮತ್ತೊಂದು ಹಿನ್ನಡೆಯಾಗಿದೆ. 14ನೇ ಆರೋಪಿ ಪ್ರದೋಷ್ ರಾವ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಿದ 59ನೇ ಸಿಸಿಹೆಚ್ ಕೋರ್ಟ್ ಆದೇಶವನ್ನು ಪ್ರಶ್ನಿಸಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರ ಏಕಸದಸ್ಯ ಪೀಠ ವಜಾಗೊಳಿಸಿದೆ. ವಿಚಾರಣಾಧೀನ ನ್ಯಾಯಾಲಯದ ತೀರ್ಮಾನದಲ್ಲಿ ಹಸ್ತಕ್ಷೇಪದ ಅಗತ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.
ದರ್ಶನ್ ಪ್ರಕರಣ: ಪತ್ನಿ ವಿಜಯಲಕ್ಷ್ಮಿ ಅರ್ಜಿ ಹೈಕೋರ್ಟ್ನಲ್ಲಿ ವಜಾ
Source: Vishwavani