ಬೆಂಗಳೂರು: ಅಟ್ಟಿಕಾ ಗೋಲ್ಡ್ ಕಂಪನಿಗೆ ಸಂಬಂಧಿಸಿದ 19 ಸ್ಥಳಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಾರಿ ನಿರ್ದೇಶನಾಲಯದ ದಾಳಿ ಮುಕ್ತಾಯಗೊಂಡ ಕೆಲವೇ ಗಂಟೆಗಳಲ್ಲಿ ಈ ಕಾರ್ಯಾಚರಣೆ ನಡೆದಿದೆ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ದಾಳಿ ನಡೆದಿದ್ದು, ಕಂಪನಿಯ ಹಣಕಾಸು ವ್ಯವಹಾರಗಳು, ದಾಖಲೆಗಳು ಮತ್ತು ಲೆಕ್ಕಪತ್ರಗಳನ್ನು ಪರಿಶೀಲಿಸಲಾಗುತ್ತಿದೆ. ಏನು ಪತ್ತೆಯಾಗಿದೆ ಎಂಬ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.
ಅಟ್ಟಿಕಾ ಗೋಲ್ಡ್ ಮೇಲೆ ED ದಾಳಿ ಬೆನ್ನಲ್ಲೇ 19 ಸ್ಥಳಗಳಲ್ಲಿ IT ದಾಳಿ
Source: Kannada Dunia