ಬರದಿಂದ ಸಂಕಷ್ಟಕ್ಕೊಳಗಾದ ರೈತರಿಗೆ ರಾಜ್ಯ ಸರ್ಕಾರ ಮೊದಲ ಹಂತದಲ್ಲಿ ತಲಾ ₹2,500 ಇನ್‌ಪುಟ್ ಸಬ್ಸಿಡಿ ನೀಡಲಿದೆ. ಸುಮಾರು 45ರಿಂದ 50 ಲಕ್ಷ ರೈತರಿಗೆ ಅನುಕೂಲವಾಗಲಿದ್ದು, ₹1,250 ಕೋಟಿ ವೆಚ್ಚವಾಗಲಿದೆ ಎಂದು ಡಿಸಿಎಂ ಡಾ. ಜಿ. ಪರಮೇಶ್ವರ ತಿಳಿಸಿದರು. ಕೇಂದ್ರದ ಎನ್‌ಡಿಆರ್‌ಎಫ್ ನೆರವಿನ ಆಧಾರದ ಮೇಲೆ ಮುಂದಿನ ಪರಿಹಾರ ಕ್ರಮಗಳನ್ನು ನಿರ್ಧರಿಸಲಾಗುವುದು ಎಂದು ಅವರು ಹೇಳಿದರು.
ಬರಪೀಡಿತ ರೈತರಿಗೆ ತಲಾ ₹2,500 ಇನ್‌ಪುಟ್ ಸಬ್ಸಿಡಿ ಘೋಷಣೆ
Source: Kannada Dunia