ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಶುಕ್ರವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, 2027ರ ವಿಧಾನಸಭಾ ಚುನಾವಣೆಗೆ ಸಿದ್ಧತೆ ಮತ್ತು ಸಂಘಟನಾ ಕಾರ್ಯತಂತ್ರ ಕುರಿತು ಚರ್ಚಿಸಿದರು. ಮೂರನೇ ಬಾರಿ ಸರ್ಕಾರ ರಚಿಸುವ ಗುರಿ ಹೊಂದಿರುವುದಾಗಿ ಮೌರ್ಯ ತಿಳಿಸಿದರು. ಕೇಂದ್ರ ಮತ್ತು ರಾಜ್ಯ ಯೋಜನೆಗಳ ಪ್ರಚಾರಕ್ಕಾಗಿ ವಿಶೇಷ ಜನಸಂಪರ್ಕ ಅಭಿಯಾನ ನಡೆಸಲಾಗುವುದು ಎಂದರು.
ಯುಪಿ ಉಪಮುಖ್ಯಮಂತ್ರಿ ಮೌರ್ಯ ದೆಹಲಿಯಲ್ಲಿ ಅಮಿತ್ ಶಾ ಭೇಟಿ
Source: Mangalorean