ಕರ್ನಾಟಕದ ರೈತರಿಗೆ ಸಿಹಿಸುದ್ದಿ ನೀಡಿರುವ ಕೇಂದ್ರ ಸರ್ಕಾರ, 2026-27ರ ಮುಂಗಾರು ಋತುವಿನಲ್ಲಿ ಸೂರ್ಯಕಾಂತಿ, ಹೆಸರುಕಾಳು ಮತ್ತು ಸೋಯಾಬೀನ್ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮೋದನೆ ನೀಡಿದೆ. ಈ ಮೂರು ಬೆಳೆಗಳಿಗೆ ಸಂಬಂಧಿಸಿದಂತೆ ಒಟ್ಟು 1,67,163 ಮೆಟ್ರಿಕ್ ಟನ್ ಖರೀದಿಗೆ ಅಸ್ತು ದೊರೆತಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿಗೆ ಸ್ಪಂದಿಸಿ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಈ ನಿರ್ಣಯ ಪ್ರಕಟಿಸಿದ್ದಾರೆ.
ಕರ್ನಾಟಕದ ಮೂರು ಬೆಳೆಗಳಿಗೆ MSP ಖರೀದಿಗೆ ಕೇಂದ್ರ ಅಸ್ತು
Source: Vishwavani