ಪಶ್ಚಿಮ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪ್ರಭಾವದಿಂದ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡು, ಪುದುಚೇರಿ, ಕೇರಳ, ಕರಾವಳಿ ಮತ್ತು ಒಳನಾಡ ಕರ್ನಾಟಕ ಹಾಗೂ ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಮಿಂಚು-ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು. ಅಕ್ಟೋಬರ್ 1ರಿಂದ 5ರವರೆಗೆ ಕೇರಳದಲ್ಲಿ ವ್ಯಾಪಕ ಮಳೆ ಮುಂದುವರಿಯಲಿದೆ.
ಪಶ್ಚಿಮ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ
Source: OneIndia Kannada