ಅಮೆರಿಕದ ಸುಂಕ ಬೆದರಿಕೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದರು. ವ್ಯಾಪಾರ, ರಕ್ಷಣೆ, ಇಂಧನ ಮತ್ತು ನಿರ್ಣಾಯಕ ತಂತ್ರಜ್ಞಾನ ಸೇರಿ ವಿವಿಧ ಕ್ಷೇತ್ರಗಳ ದ್ವಿಪಕ್ಷೀಯ ಸಹಕಾರವನ್ನು ಇಬ್ಬರೂ ಪರಿಶೀಲಿಸಿದರು. ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವವನ್ನು ಮುಂದುವರಿಸಲು ನಿಕಟ ಸಂಪರ್ಕದಲ್ಲಿರಲು ಒಪ್ಪಿಕೊಂಡರು. ಈ ವೇಳೆ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅಮೆರಿಕ ಪ್ರವಾಸದಲ್ಲಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚರ್ಚೆಗಳು ಮುಂದುವರಿದಿವೆ.
ಸುಂಕ ಬೆದರಿಕೆ ನಡುವೆ ಮೋದಿ–ಟ್ರಂಪ್ ದೂರವಾಣಿ ಮಾತುಕತೆ
Source: Vishwavani