ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಸೈಕ್ಲೋನಿಕ್ ಪರಿಚಲನೆಯಿಂದ ರಾಜ್ಯದಲ್ಲಿ ಅಕ್ಟೋಬರ್ ಮೊದಲ ವಾರದವರೆಗೆ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕೆಯಾಗಿ ಬೆಂಗಳೂರು ಸೇರಿ 12 ಜಿಲ್ಲೆಗಳಿಗೆ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಮತ್ತು ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಬೆಂಗಳೂರು ಸೇರಿ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Source: Vishwavani