ಮೋಟಾರು ವಾಹನ ನಿರೀಕ್ಷಕ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಹೆಚ್ಚುವರಿ ಆಯ್ಕೆಪಟ್ಟಿಯನ್ನು ಹಿಂಪಡೆದಿದೆ. 2016ರ ಫೆ.4ರಂದು 127+23 (ಹೈ.ಕ) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. 2025ರ ಏ.16ರಂದು ಪ್ರಕಟಿಸಿದ್ದ ಹೆಚ್ಚುವರಿ ಪಟ್ಟಿಯನ್ನು ಹಿಂಪಡೆಯಲಾಗಿದೆ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ಕೆ.ಜ್ಯೋತಿ ತಿಳಿಸಿದ್ದಾರೆ.
ಮೋಟಾರು ವಾಹನ ನಿರೀಕ್ಷಕ ನೇಮಕಾತಿಯಲ್ಲಿ ಅಕ್ರಮ ಆರೋಪ: ಹೆಚ್ಚುವರಿ ಆಯ್ಕೆಪಟ್ಟಿ ಹಿಂಪಡೆದ ಕೆಪಿಎಸ್‌ಸಿ
Source: Vishwavani