ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ಚುನಾವಣಾ ಆಯೋಗದ ಕಾರ್ಯನಿರ್ವಹಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಕೇವಲ ಸುದ್ದಿ ವರದಿಗಳ ಆಧಾರದಲ್ಲಿ ಆದೇಶ ಹೊರಡಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಜಾಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರನ್ನೊಳಗೊಂಡ ಪೀಠ ಹೇಳಿದೆ. ಶಾಸನಬದ್ಧ ನಿಯಮಗಳಿಗೆ ವಿರುದ್ಧವಾಗಿ ನಿರ್ಧಾರ ಕೈಗೊಂಡರೆ ಮಾತ್ರ ತಡೆ ನೀಡಬಹುದು ಎಂದು ಸ್ಪಷ್ಟಪಡಿಸಿದೆ.
ಚುನಾವಣಾ ಆಯೋಗದ ಕಾರ್ಯಕ್ಕೆ ತಡೆ ನೀಡಲು ಸುಪ್ರೀಂ ನಿರಾಕರಣೆ
Source: Vishwavani