ಫ್ಲೈದುಬೈ ವಿಮಾನದ ಒಮಾನ್ ಮೂಲದ ಕೋ-ಪೈಲಟ್ ಹಮಾಮ್ ಅಲ್-ಹಮ್ಮಾಮಿ, ಭಾರತೀಯ ಮೂಲದ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರನ್ನು ಹತ್ಯೆ ಮಾಡಿ ವಿಮಾನವನ್ನು ಇಸ್ರೇಲ್‌ನ ಬೆನ್ ಗುರಿಯನ್ ವಿಮಾನ ನಿಲ್ದಾಣ ಅಥವಾ ಇತರ ಪ್ರಮುಖ ಗುರಿಗಳಿಗೆ ಅಪ್ಪಳಿಸುವ ಸಂಚು ರೂಪಿಸಿದ್ದ ಎಂಬ ಆರೋಪ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಜೋರ್ಡಾನ್ ವಾಯುಪ್ರದೇಶದಲ್ಲಿ ನಡೆದ ದಾಳಿಯ ವೇಳೆ ಕ್ಯಾಪ್ಟನ್ ಸ್ಮಿತ್ ಧೈರ್ಯದಿಂದ ಪ್ರತಿರೋಧಿಸಿದ್ದು, ಕ್ಯಾಬಿನ್ ಸಿಬ್ಬಂದಿ ಹಾಗೂ ಪ್ರಯಾಣಿಕರು ಕೋ-ಪೈಲಟ್‌ನನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದರು. ಪ್ರಕರಣದ ತನಿಖೆ ಮುಂದುವರಿದಿದ್ದು, ವಿಮಾನಯಾನ ಭದ್ರತೆ ಮತ್ತು ಗುಪ್ತಚರ ಮಾಹಿತಿ ಹಂಚಿಕೆ ಕುರಿತು ಹಲವು ಪ್ರಶ್ನೆಗಳು ಎದ್ದಿವೆ.
ಫ್ಲೈದುಬೈ ವಿಮಾನ ಅಪಹರಣ ಸಂಚು ಬಯಲು
Source: Vishwavani