ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಇಂಡಿಯಾ ಒಕ್ಕೂಟ ನಡೆಸಿದ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿ ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಸುಮಾರು ಎರಡು ಗಂಟೆಗಳ ಬಳಿಕ ಬಿಡುಗಡೆ ಮಾಡಿದರು. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಕುರಿತು ಆಕ್ಷೇಪ ವ್ಯಕ್ತಪಡಿಸಿ, ಚುನಾವಣಾ ಆಯೋಗದ ಕಚೇರಿಯತ್ತ ಸಾಗುತ್ತಿದ್ದ ನಾಯಕರನ್ನು ಬ್ಯಾರಿಕೇಡ್ ಹಾಕಿ ತಡೆಯಲಾಯಿತು. ಮಧ್ಯ ದೆಹಲಿಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ: ಇಂಡಿಯಾ ಒಕ್ಕೂಟ ಪ್ರತಿಭಟನೆ
Source: Vishwavani