ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ, ಮಾಫಿ ಸಾಕ್ಷಿ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ನಟ ದರ್ಶನ್ ಪರ ಸಲ್ಲಿಸಲಾಗಿದ್ದ ಎರಡು ಅರ್ಜಿಗಳನ್ನು 59ನೇ ಸಿಸಿಹೆಚ್ ನ್ಯಾಯಾಲಯ ತಿರಸ್ಕರಿಸಿದೆ. ಪ್ರದೋಷ್ ಅವರನ್ನು ನ್ಯಾಯಾಲಯಕ್ಕೆ ಕರೆತರುವಾಗ ಯಾರೊಂದಿಗೂ ಮಾತನಾಡದಂತೆ ನಿರ್ಬಂಧ ವಿಧಿಸಬೇಕು ಹಾಗೂ ಮೊದಲ ದಿನ ಹೇಳದ ಅಂಶಗಳನ್ನು ನಂತರ ಸೇರಿಸಲು ಅವಕಾಶ ನೀಡಬಾರದು ಎಂದು ದರ್ಶನ್ ಪರ ವಕೀಲರು ವಾದಿಸಿದ್ದರು. ಪ್ರದೋಷ್ ಅವರ ಸಾಕ್ಷ್ಯ ದಾಖಲಿಸುವ ಕಾರ್ಯ ನಾಳೆಯೂ ಮುಂದುವರಿಯಲಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಪರ ಎರಡೂ ಅರ್ಜಿಗಳು ತಿರಸ್ಕೃತ
Source: Zee Kannada News