ಆಕಾಶವಾಣಿ ಭವನಕ್ಕೆ ಬಲವಂತವಾಗಿ ಪ್ರವೇಶಿಸಿದ ಆರೋಪದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ವಾಧ್ರಾ ಮತ್ತು ಇಂಡಿಯಾ ಕೂಟದ ಸಂಸದರ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಅವರನ್ನು ಮಂಗಳವಾರ ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದ್ದರು. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಶೀಲನೆ (ಎಸ್ಐಆರ್) ವಿರೋಧಿಸಿ ಈ ಪ್ರತಿಭಟನೆ ನಡೆದಿತ್ತು.
ರಾಹುಲ್, ಪ್ರಿಯಾಂಕಾ ವಿರುದ್ಧ ದೆಹಲಿ ಪೊಲೀಸ್ ಎಫ್ಐಆರ್
Source: Mangalorean