ಕರ್ನಾಟಕ ಸರ್ಕಾರವು ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಕ್ಷೇತ್ರವಾರು ಮೀಸಲಾತಿ ಅಧಿಸೂಚನೆ ಹೊರಡಿಸಿದೆ. 31 ಜಿಲ್ಲಾ ಪಂಚಾಯಿತಿಗಳ 1,129 ಸ್ಥಾನಗಳಲ್ಲಿ 571 ಮತ್ತು ತಾಲೂಕು ಪಂಚಾಯಿತಿಗಳ 3,656 ಸ್ಥಾನಗಳಲ್ಲಿ 1,905 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಪಂಚಾಯತ್ ರಾಜ್ ಅಧಿನಿಯಮ 1993ರ ನಿಯಮಾವಳಿಗಳ ಅನ್ವಯ ಹಿಂದಿನ ಎಲ್ಲ ಅಧಿಸೂಚನೆಗಳನ್ನು ರದ್ದುಪಡಿಸಿ ಹೊಸ ಪಟ್ಟಿ ಅಂತಿಮಗೊಳಿಸಲಾಗಿದೆ.
ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಮೀಸಲಾತಿ ಅಧಿಸೂಚನೆ ಪ್ರಕಟ
Source: Vishwavani