ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಅಕ್ಟೋಬರ್ 11ರಿಂದ 22ರವರೆಗೆ ಮಂಗಳೂರು ದಸರಾ ಮತ್ತು ನವರಾತ್ರಿ ಮಹೋತ್ಸವ ನಡೆಯಲಿದೆ. ಅಕ್ಟೋಬರ್ 12ರ ಸಂಜೆ 6.30ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸುವರು. ಅಕ್ಟೋಬರ್ 21ರಂದು ಸಂಜೆ 4ಕ್ಕೆ ಐತಿಹಾಸಿಕ ದಸರಾ ಶೋಭಾಯಾತ್ರೆ ಆರಂಭವಾಗಲಿದೆ. ಭಜನೆ, ನೃತ್ಯ, ಸಂಗೀತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಮಂಗಳೂರು ದಸರಾ 2026: ಅಕ್ಟೋಬರ್ 12ಕ್ಕೆ ಸಿಎಂ ಶಿವಕುಮಾರ್ ಉದ್ಘಾಟನೆ
Source: Mangalorean