ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪಿಜಿಸಿಇಟಿ-26ರ ಮೊದಲ ಸುತ್ತಿನ ಸೀಟು ಪಡೆದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಗೆ ಅಕ್ಟೋಬರ್ 9ರವರೆಗೆ ದಿನಾಂಕ ವಿಸ್ತರಿಸಿದೆ. ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿ ಕಾಲೇಜಿನಲ್ಲಿ ಪ್ರವೇಶ ಪಡೆಯಲು ಅಕ್ಟೋಬರ್ 11ರವರೆಗೆ ಅವಕಾಶವಿದೆ. ಅಕ್ಟೋಬರ್ 10ರಂದು ಸಾರ್ವತ್ರಿಕ ರಜೆ ಇರುವುದು ವಿಸ್ತರಣೆಗೆ ಕಾರಣ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಪಿಜಿಸಿಇಟಿ ಶುಲ್ಕ ಪಾವತಿಗೆ ದಿನಾಂಕ ವಿಸ್ತರಣೆ
Source: Kannada Dunia