ಕರ್ನಾಟಕದ 31 ಜಿಲ್ಲಾ ಪಂಚಾಯಿತಿಗಳ 1,129 ಮತ್ತು 239 ತಾಲೂಕು ಪಂಚಾಯಿತಿಗಳ 3,656 ಸದಸ್ಯ ಸ್ಥಾನಗಳಿಗೆ ಮೀಸಲಾತಿ ಅಂತಿಮಗೊಂಡಿದೆ. ಒಟ್ಟು 4,785 ಸ್ಥಾನಗಳ ಪೈಕಿ 2,476 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿದ್ದು, ಜಿಲ್ಲಾ ಪಂಚಾಯಿತಿಯಲ್ಲಿ 571 ಮತ್ತು ತಾಲೂಕು ಪಂಚಾಯಿತಿಯಲ್ಲಿ 1,905 ಸ್ಥಾನಗಳು ಮಹಿಳೆಯರ ಪಾಲಾಗಿವೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಅನ್ವಯ ಅಧಿಸೂಚನೆ ಹೊರಡಿಸಿದೆ.
ಜಿಲ್ಲಾ, ತಾಲೂಕು ಪಂಚಾಯ್ತಿ ಚುನಾವಣೆ: ಶೇ.50ಕ್ಕೂ ಹೆಚ್ಚು ಸ್ಥಾನಗಳು ಮಹಿಳೆಯರಿಗೆ ಮೀಸಲು
Source: Zee Kannada News