ಬೆಂಗಳೂರು: ನಮ್ಮ ಮೆಟ್ರೋ ಪಿಂಕ್ ಲೈನ್‌ನ ಕಾಳೇನ ಅಗ್ರಹಾರ–ತಾವರೆಕೆರೆ ನಡುವಿನ 7.5 ಕಿ.ಮೀ. ಎಲಿವೇಟೆಡ್ ಮಾರ್ಗದ ಸುರಕ್ಷತಾ ಪರಿಶೀಲನೆ ಪೂರ್ಣಗೊಂಡಿದೆ. ಅಕ್ಟೋಬರ್ 6ರಿಂದ 8ರವರೆಗೆ ದಕ್ಷಿಣ ವಲಯ ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತ ವಿ. ವೆಂಕಟಸುಬ್ರಮಣಿಯನ್ ನೇತೃತ್ವದಲ್ಲಿ ಈ ಪರಿಶೀಲನೆ ನಡೆಯಿತು. ಈ ಮಾರ್ಗದಲ್ಲಿ ಕಾಳೇನ ಅಗ್ರಹಾರ, ಹುಳಿಮಾವು, ಐಐಎಂಬಿ, ಜೆ.ಪಿ. ನಗರ 4ನೇ ಹಂತ, ಜಯದೇವ ಆಸ್ಪತ್ರೆ ಮತ್ತು ತಾವರೆಕೆರೆ ಸೇರಿ 6 ನಿಲ್ದಾಣಗಳಿವೆ. ಪ್ರಯಾಣಿಕರ ಸೇವೆ ಆರಂಭಕ್ಕೆ ಇದು ಮಹತ್ವದ ಮೈಲುಗಲ್ಲು.
ನಮ್ಮ ಮೆಟ್ರೋ ಪಿಂಕ್ ಲೈನ್ 7.5 ಕಿ.ಮೀ. ಮಾರ್ಗದ ಸುರಕ್ಷತಾ ಪರಿಶೀಲನೆ ಪೂರ್ಣ
Source: Vishwavani