ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ 57ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ತೆರಿಗೆದಾರರಿಗೆ ಬಿಗ್ ರಿಲೀಫ್ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ. ಜಿಎಸ್‌ಟಿ ಅಧಿಕಾರಿಗಳ ನೇರ ಬಂಧನ ಅಧಿಕಾರ ಸಂಪೂರ್ಣ ರದ್ದುಗೊಳಿಸಲಾಗಿದ್ದು, ಕ್ರಿಮಿನಲ್ ಮೊಕದ್ದಮೆ ಮಿತಿಯನ್ನು ₹1 ಕೋಟಿಯಿಂದ ₹5 ಕೋಟಿಗೆ ಹೆಚ್ಚಿಸಲಾಗಿದೆ. ಇದರಿಂದ ಸಣ್ಣ ಹಾಗೂ ಮಧ್ಯಮ ಉದ್ಯಮಿಗಳಿಗೆ ನಿರಾಳತೆ ದೊರೆತಿದ್ದು, ಅಗತ್ಯ ಕಾನೂನು ತಿದ್ದುಪಡಿಗಳ ನಂತರ ಹೊಸ ನಿಯಮಗಳು ಜಾರಿಗೆ ಬರಲಿವೆ.
ಜಿಎಸ್‌ಟಿ 2.0: ಅಧಿಕಾರಿಗಳ ನೇರ ಬಂಧನ ಅಧಿಕಾರ ರದ್ದು
Source: Zee Kannada News