ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆದ ವಿಪಕ್ಷ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಪ್ರತಿಭಟನಾಕಾರರು ಪೊಲೀಸರ ಮೇಲೆ ಹಲ್ಲೆ ನಡೆಸಿ ಸಮವಸ್ತ್ರ ಹರಿದು, ನೇಮ್‌ಪ್ಲೇಟ್ ಮುರಿದು, ಟೋಪಿ ಎಸೆದಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಘಟನೆಗೆ ಸಂಬಂಧಿಸಿ ಮೂರು ಪ್ರತ್ಯೇಕ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ: ದೆಹಲಿಯಲ್ಲಿ ವಿಪಕ್ಷ ನಾಯಕರ ವಶ, ಪೊಲೀಸರ ಮೇಲೆ ಹಲ್ಲೆ
Source: Vishwavani