ದೆಹಲಿಯ ಜಂತರ್ ಮಂತರ್ನಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ ವೇಳೆ ಮಹಿಳಾ ಪೊಲೀಸರ ಮೇಲೆ ದೌರ್ಜನ್ಯ ನಡೆದಿದೆ ಎಂದು ಕೇಂದ್ರ ಸರ್ಕಾರ ಆರೋಪಿಸಿದ್ದು, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಶುಕ್ರವಾರ ಸುಪ್ರೀಂ ಕೋರ್ಟ್ಗೆ ದೂರು ಸಲ್ಲಿಸಿದರು. ಅನುಮತಿ ಇಲ್ಲದ ಪ್ರತಿಭಟನೆ ಕಾನೂನುಬಾಹಿರವಾಗಿತ್ತು ಎಂದು ಅವರು ತಿಳಿಸಿದರು. ನಿರ್ಬಂಧಗಳ ವ್ಯಾಪ್ತಿಯನ್ನು ಪ್ರಶ್ನಿಸಿದ ನ್ಯಾಯಪೀಠ, ಪ್ರತಿಭಟನೆ ಮತ್ತು ಸಂಚಾರ ಹಕ್ಕುಗಳ ನಡುವೆ ಸಮತೋಲನ ಕಾಯ್ದುಕೊಳ್ಳಬೇಕು ಎಂದು ಹೇಳಿತು.
ಜಂತರ್ ಮಂತರ್ ಪ್ರತಿಭಟನೆ: ಮಹಿಳಾ ಪೊಲೀಸರ ಮೇಲೆ ದೌರ್ಜನ್ಯ ಆರೋಪ, ಸುಪ್ರೀಂ ಕೋರ್ಟ್ಗೆ ದೂರು
Source: Vishwavani