ಬೆಂಗಳೂರು ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಯೊಬ್ಬಳು ಹ್ಯಾಂಡ್‌ಬಾರ್ ಹಿಡಿದು ಪುಲ್ ಅಪ್ ಸ್ಟಂಟ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಸಾರ್ವಜನಿಕ ಸುರಕ್ಷತೆ ಮತ್ತು ಮೆಟ್ರೋ ನಿಯಮಗಳ ಉಲ್ಲಂಘನೆಯ ಗಂಭೀರ ಪ್ರಶ್ನೆ ಎಬ್ಬಿಸಿದೆ. BMRCL ಇದುವರೆಗೆ ಯಾವುದೇ ಅಧಿಕೃತ ಕ್ರಮ ಕೈಗೊಂಡಿಲ್ಲದಿರುವುದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ನಿಯಮಬಾಹಿರ ಚಟುವಟಿಕೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ನೆಟಿಗರು ಒತ್ತಾಯಿಸುತ್ತಿದ್ದಾರೆ.
ನಮ್ಮ ಮೆಟ್ರೋದಲ್ಲಿ ಯುವತಿಯ ಪುಲ್ ಅಪ್ ಸ್ಟಂಟ್: BMRCL ಮೌನ
Source: Zee Kannada News