ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನ ಕಿಂಗ್ ಖಾಲಿದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಶನಿವಾರ ಇರಾನ್ ಬೆಂಬಲಿತ ಹೌತಿ ಬಂಡುಕೋರರು ನಡೆಸಿದ ದಾಳಿಯಲ್ಲಿ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದು, 309 ಜನರು ಗಾಯಗೊಂಡಿದ್ದಾರೆ ಎಂದು ಸೌದಿ ನಾಗರಿಕ ವಿಮಾನಯಾನ ಪ್ರಾಧಿಕಾರ ತಿಳಿಸಿದೆ. ಮೃತರಲ್ಲಿ ಓರ್ವ ಭಾರತೀಯರೂ ಇದ್ದು, ಭಾರತ ರಾಯಭಾರ ಕಚೇರಿ ಸಂತಾಪ ವ್ಯಕ್ತಪಡಿಸಿದೆ. ದಾಳಿಯಿಂದ 225 ವಿಮಾನಗಳ ಹಾರಾಟ ರದ್ದಾಗಿದ್ದು, ವಿಮಾನ ನಿಲ್ದಾಣದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.
ರಿಯಾದ್ ವಿಮಾನ ನಿಲ್ದಾಣದ ಮೇಲೆ ಹೌತಿ ದಾಳಿ: 12 ಸಾವು, 309 ಗಾಯ
Source: Vishwavani