ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಹಾರ ಮತ್ತು ಪಾನೀಯ ಸೇವಾ ಸಂಸ್ಥೆಯ ಮಾನವ ಸಂಪನ್ಮೂಲ ವ್ಯವಸ್ಥಾಪಕರ ವಿರುದ್ಧ 26 ವರ್ಷದ ಮಹಿಳಾ ಉದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ. ಮೇ ತಿಂಗಳಲ್ಲಿ ಕೆಲಸಕ್ಕೆ ಸೇರಿದ ಮಹಿಳೆ, ಎಚ್ಆರ್ ವ್ಯವಸ್ಥಾಪಕರು ತನ್ನ ಖಾಸಗಿತ್ತ್ವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಎನ್ಎಸ್ ಸೆಕ್ಷನ್ 78(2) ಮತ್ತು 79 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗೆ ನೋಟಿಸ್ ಜಾರಿಯಾಗಿದೆ.
ವಿಮಾನ ನಿಲ್ದಾಣದ ಎಚ್ಆರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಎಫ್ಐಆರ್
Source: Vishwavani