ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕ ಮಾಡಿದ್ದಾರೆ. ಥಾವರ್‌ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿ ಮುಕ್ತಾಯವಾಗಿದ್ದು, ಶೀಘ್ರದಲ್ಲೇ ಯಾದವ್ ಅಧಿಕಾರ ಸ್ವೀಕರಿಸಲಿದ್ದಾರೆ. ಬಿಜೆಪಿ ಹಿರಿಯ ನಾಯಕಿ ಹಾಗೂ ಸಂಸದೀಯ ಮಂಡಳಿ ಸದಸ್ಯೆಯಾಗಿರುವ ಅವರು, ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಬಿಎಸ್‌ಎಫ್ ಡೆಪ್ಯುಟಿ ಕಮಾಂಡೆಂಟ್ ಸುಖಬೀರ್ ಸಿಂಗ್ ಯಾದವ್ ಅವರ ಪತ್ನಿ. ಈ ನೇಮಕದೊಂದಿಗೆ ದೇಶದ ಆರು ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನಿಯೋಜಿಸಲಾಗಿದೆ.
ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ
Source: Vishwavani