ಮಹಿಳಾ ಪ್ರೀಮಿಯರ್ ಲೀಗ್ 2027ರ ಐದನೇ ಆವೃತ್ತಿಯ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಜನವರಿ 14ರಿಂದ ಫೆಬ್ರವರಿ 7ರವರೆಗೆ ನಡೆಯುವ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ವಡೋದರಾದಲ್ಲಿ ಮುಖಾಮುಖಿಯಾಗಲಿವೆ. ಫೆಬ್ರವರಿ 5ರಂದು ಎಲಿಮಿನೇಟರ್, ಫೆಬ್ರವರಿ 7ರಂದು ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಫೈನಲ್ ನಡೆಯಲಿದೆ.
ಡಬ್ಲ್ಯೂಪಿಎಲ್ 2027 ವೇಳಾಪಟ್ಟಿ ಪ್ರಕಟ: ಜನವರಿ 14ಕ್ಕೆ ಆರಂಭ
Source: Zee Kannada News