ಹಾವೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರು 'ವೋಟ್ ಬಚಾವೋ, ದೇಶ ಬಚಾವೋ' ಘೋಷಣೆಯೊಂದಿಗೆ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ಎಸ್‌ಐಆರ್ ಪ್ರಕ್ರಿಯೆ ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು. ಚುನಾವಣಾ ಆಯೋಗ ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು ಎಂದು ಒತ್ತಾಯಿಸಿದ ಅವರು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಹಾವೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ: ಎಸ್‌ಐಆರ್ ರದ್ದತಿಗೆ ಆಗ್ರಹ
Source: Vishwavani