ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಂದ ವ್ಯಾಪಾರಕ್ಕೆ ತೀವ್ರ ಅಡಚಣೆಯಾಗಿದೆ ಎಂದು ಕಾನ್ಫಡರೇಷನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್ (ಸಿಎಐಟಿ) ಆಕ್ರೋಶ ವ್ಯಕ್ತಪಡಿಸಿದೆ. ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿರುವ ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರ್ತಿಯಾ, ಹಬ್ಬದ ಋತುವಿನಲ್ಲಿ ವ್ಯಾಪಾರಿಗಳಿಗಾದ ನಷ್ಟದ ಬಗ್ಗೆ 5 ಪ್ರಶ್ನೆಗಳನ್ನು ಎತ್ತಿದ್ದಾರೆ. ನವೆಂಬರ್ 1ರಂದು ರಾಮ್‌ಲೀಲಾ ಮೈದಾನದ ಪ್ರತಿಭಟನೆಯಿಂದ ವಹಿವಾಟಿಗೆ ಭಾರಿ ಹಿನ್ನಡೆಯಾಗಿದೆ ಎಂದು ತಿಳಿಸಲಾಗಿದೆ.
ರಾಹುಲ್ ಗಾಂಧಿ ವಿರುದ್ಧ ವ್ಯಾಪಾರಿಗಳ ಆಕ್ರೋಶ: ಸಿಎಐಟಿ ಪತ್ರ
Source: Vishwavani