ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಉನ್ನತ ಮಟ್ಟದ ಸಭೆಯ ಬಳಿಕ ಮುಂದಿನ 15 ದಿನಗಳವರೆಗೆ ಪ್ರತಿದಿನ 3,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಕುಡಿಯುವ ನೀರಿನ ಕೊರತೆಯ ಆತಂಕ ಇರುವ ಸಂದರ್ಶದಲ್ಲಿ ಈ ಶಿಫಾರಸು ಕಳವಳ ಮೂಡಿಸಿದೆ. ಇದು ಕಾವೇರಿ ನೀರು ಹಂಚಿಕೆ ವಿವಾದವನ್ನು ಮತ್ತೆ ಚರ್ಚೆಯ ಕೇಂದ್ರಕ್ಕೆ ತಂದಿದೆ.
ತಮಿಳುನಾಡಿಗೆ ಪ್ರತಿದಿನ 3,000 ಕ್ಯೂಸೆಕ್ ಕಾವೇರಿ ನೀರು ಬಿಡಲು CWRC ಶಿಫಾರಸು
Source: Zee Kannada News