ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳನ್ನು ಕರ್ನಾಟಕ ಲೋಕಸೇವಾ ಆಯೋಗದಿಂದ ಹೊರಗಿರಿಸಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಆದ್ಯತೆ ಮೇರೆಗೆ ಭರ್ತಿ ಮಾಡಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ 371(ಜೆ) ಅನುಷ್ಠಾನ ಉಪಸಮಿತಿ ಸಭೆಯಲ್ಲಿ ಮಾತನಾಡಿ, ಕಾಯ್ದೆಯ ಅನುಷ್ಠಾನದಲ್ಲಿ ನಿರ್ಲಕ್ಷ್ಯ ಅಥವಾ ವಿಳಂಬ ಸಲ್ಲದು ಎಂದು ಎಚ್ಚರಿಸಿದರು. ಹಿಂದಿನ ಸಭೆಯ ನಿರ್ದೇಶನಗಳ ಪ್ರಗತಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, ಮುಂದಿನ ಸಭೆಯಲ್ಲಿ ಸ್ಪಷ್ಟ ಅಂಕಿ-ಅಂಶ ಸಲ್ಲಿಸುವಂತೆ ತಾಕೀತು ಮಾಡಿದರು.
ಕೆಕೆ ಹುದ್ದೆಗಳನ್ನು ಕೆಪಿಎಸ್‌ಸಿಯಿಂದ ಹೊರಗಿರಿಸಿ, ಕೆಇಎ ಮೂಲಕ ಭರ್ತಿ ಮಾಡಿ: ಪ್ರಿಯಾಂಕ್ ಖರ್ಗೆ ಸೂಚನೆ
Source: Vishwavani