ಬಳ್ಳಾರಿ ರಸ್ತೆಯಲ್ಲಿ 18 ತಿಂಗಳು ಸಂಚಾರ ನಿರ್ಬಂಧ

ಬಳ್ಳಾರಿ ರಸ್ತೆಯಲ್ಲಿ 18 ತಿಂಗಳು ಸಂಚಾರ ನಿರ್ಬಂಧ

ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿ ಮೇಖ್ರಿ ಸರ್ಕಲ್‌ನಿಂದ ಹೆಬ್ಬಾಳದವರೆಗೆ ಬಿಡಿಎ ನಾಲ್ಪಥ ಎಲಿವೇಟೆಡ್ ಕಾರಿಡಾರ್ ನಿರ್ಮಾಣದ ಹಿನ್ನೆಲೆಯಲ್ಲಿ ಮುಂದಿನ 18 ತಿಂಗಳ ಕಾಲ ಸಂಚಾರ ನಿರ್ಬಂಧಿಸಲಾಗಿದೆ. ಈ ಮಾರ್ಗದಲ್ಲಿ ಸರಕು ವಾಹನ ಹಾಗೂ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳ ಸಂಚಾರ ಸಂಪೂರ್ಣ ನಿಷೇಧಿಸಲಾಗಿದ್ದು, ಸರ್ವಿಸ್ ರಸ್ತೆಯಲ್ಲಿ ಮಾತ್ರ ಸೀಮಿತ ವಾಹನ ಸಂಚಾರಕ್ಕೆ ಅವಕಾಶವಿದೆ. ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರು ಪರ್ಯಾಯ ಮಾರ್ಗ ಬಳಸಿ, ಕನಿಷ್ಠ ಒಂದರಿಂದ ಎರಡು ಗಂಟೆ ಮುಂಚಿತವಾಗಿ ಹೊರಡುವಂತೆ ಸೂಚಿಸಲಾಗಿದೆ.

Source: Vishwavani

More in Top Stories

Read the live feed on ZapIndies