ಕೋಲ್ಕತ್ತಾದಲ್ಲಿ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ನಿವಾಸದ ಮೇಲೆ ಶನಿವಾರ ನಡುರಾತ್ರಿ ದಾಳಿ ನಡೆದಿದೆ. ಹುಟ್ಟುಹಬ್ಬದ ಬ್ಯಾನರ್ ಅಳವಡಿಸುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಕಲ್ಲು-ಇಟ್ಟಿಗೆ ಎಸೆದ ಆರೋಪವಿದೆ. ಘರ್ಷಣೆಯಲ್ಲಿ ಕನಿಷ್ಠ ಎಂಟು ಟಿಎಂಸಿ ಕಾರ್ಯಕರ್ತರು ಗಾಯಗೊಂಡಿದ್ದು ಮೂವರ ಸ್ಥಿತಿ ಗಂಭೀರವಾಗಿದೆ. ಕಳೆದ ಆರು ತಿಂಗಳಲ್ಲಿ ತಮ್ಮ ಜೀವಕ್ಕೆ ನಡೆದ ಏಳನೇ ಯತ್ನ ಎಂದು ಬ್ಯಾನರ್ಜಿ ಆರೋಪಿಸಿದ್ದಾರೆ.
ಅಭಿಷೇಕ್ ಬ್ಯಾನರ್ಜಿ ನಿವಾಸದ ಮೇಲೆ ದಾಳಿ: ಎಂಟು ಮಂದಿಗೆ ಗಾಯ
Source: Vishwavani