ಕರ್ನಾಟಕದ ಮಾಜಿ ಸಚಿವ ಸಿ.ವೀರಣ್ಣ (86) ನಿನ್ನೆ ರಾತ್ರಿ ತಮ್ಮ ತೋಟದ ಮನೆಯಲ್ಲಿ ನಿಧನರಾಗಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿದ್ದ ಅವರು 1983ರಲ್ಲಿ ವಿಧಾನಸಭಾ ಉಪಸಭಾಪತಿಯಾಗಿ, 1984-89ರಲ್ಲಿ ರಾಮಕೃಷ್ಣಹೆಗ್ಗಡೆ ಮತ್ತು ಎಸ್.ಆರ್.ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ವಾಲ್ಮೀಕಿ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರ ನಿಧನಕ್ಕೆ ಡಿಸಿಎಂ ಪರಮೇಶ್ವರ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮಾಜಿ ಸಚಿವ ಸಿ.ವೀರಣ್ಣ ನಿಧನ
Source: Zee Kannada News
Read the live feed on ZapIndies