2020ರ ದೆಹಲಿ ಗಲಭೆಯ ವೇಳೆ ಐಬಿ ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣದಲ್ಲಿ ಮಾಜಿ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ತಾಹಿರ್ ಹುಸೇನ್‌ಗೆ ದೆಹಲಿಯ ಕರ್ಕರಡೂಮಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಅಪರೂಪದಲ್ಲೇ ಅಪರೂಪದ ಪ್ರಕರಣ ಎಂದು ಹೇಳಿದ ನ್ಯಾಯಾಲಯ, ಕ್ರೂರ ಹತ್ಯೆ ಮತ್ತು ಮೃತದೇಹವನ್ನು ಚರಂಡಿಗೆ ಎಸೆದಿರುವುದನ್ನು ಗಂಭೀರವಾಗಿ ಪರಿಗಣಿಸಿದೆ. ಆದರೆ ಆರೋಪಿಗಳ ಪಾತ್ರ ಮತ್ತು ಸಂದರ್ಭಗಳನ್ನು ಗಮನಿಸಿ ಮರಣದಂಡನೆ ಬದಲು ಜೀವಾವಧಿ ವಿಧಿಸಲಾಗಿದೆ. ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಆರೋಪಿ ಪರ ವಕೀಲರು ಹೇಳಿದ್ದಾರೆ.
ದೆಹಲಿ ಗಲಭೆ: ತಾಹಿರ್ ಹುಸೇನ್‌ಗೆ ಜೀವಾವಧಿ ಶಿಕ್ಷೆ
Source: Vishwavani
Read the live feed on ZapIndies