ಶಕೀಬ್ ಅಲ್ ಹಸನ್ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಶಕೀಬ್ ಅಲ್ ಹಸನ್ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಬಾಂಗ್ಲಾದೇಶದ ಮಾಜಿ ಕ್ರಿಕೆಟ್ ನಾಯಕ ಹಾಗೂ ಆವಾಮಿ ಲೀಗ್ನ ಮಾಜಿ ಸಂಸದ ಶಕೀಬ್ ಅಲ್ ಹಸನ್ ಅವರ ಪೂರ್ವಜರ ನಿವಾಸದ ಮೇಲೆ ಬುಧವಾರ ರಾತ್ರಿ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ. ಮಾಜಿ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡ ಕೆಲವೇ ಗಂಟೆಗಳ ನಂತರ ಈ ದಾಳಿ ನಡೆದಿದ್ದು, ದಾಳಿಕೋರರು ಮನೆಗೆ ಕಲ್ಲು ತೂರಿ ಕಿಟಕಿಗಳನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಯಾವುದೇ ಗಾಯಗಳು ವರದಿಯಾಗಿಲ್ಲ. ಘಟನೆ ಬಳಿಕ ಪ್ರದೇಶದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.

Source: Zee Kannada News

Read the live feed on ZapIndies