ಆಂಧ್ರಪ್ರದೇಶದ ರಾಜಮಂಡ್ರಿಯಲ್ಲಿ ಕಾರು ಡಿಕ್ಕಿ ಹೊಡೆದು ಗಾಯಗೊಂಡಿದ್ದ 28 ವರ್ಷದ ವೈದ್ಯ ವಿದ್ಯಾರ್ಥಿನಿ ಡಾ. ಪ್ರಿಯಾಂಕಾ ಹೈದರಾಬಾದ್ನಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಆಗಸ್ಟ್ 3ರಂದು ಮದ್ಯದ ಅಮಲಿನಲ್ಲಿದ್ದ ಇಬ್ಬರು ಯುವಕರು ತಮ್ಮ SUVನಿಂದ ಆಕೆಯ ಸ್ಕೂಟರ್ಗೆ ಗುದ್ದಿದ್ದರು. ಪೊಲೀಸರು ಆರೋಪಿಗಳನ್ನು ಬಂಧಿಸಿ, ಕೊಲೆಗೆ ಸಮಾನವಾದ ನರಹತ್ಯೆ ಪ್ರಯತ್ನ ಸೇರಿದಂತೆ ಪ್ರಕರಣ ದಾಖಲಿಸಿದ್ದಾರೆ.
ಹಿಟ್ & ರನ್: ವೈದ್ಯ ವಿದ್ಯಾರ್ಥಿನಿ ಸಾವು, ಇಬ್ಬರು ಆರೋಪಿಗಳು ಬಂಧನ
Source: Public TV