ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಯ 10 ದಿನಗಳ ಬಳಿಕ ಖಾತೆ ಹಂಚಿಕೆ ಮಾಡಲಾಗಿದ್ದು, ಹಲವು ಸಚಿವರ ಖಾತೆಗಳನ್ನು ಬದಲಿಸಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ ಸಚಿವರ ಸಭೆ ಕರೆದಿದ್ದಾರೆ. ನಾಳೆಯಿಂದ ಆರಂಭವಾಗುವ ಮಳೆಗಾಲದ ಅಧಿವೇಶನದಲ್ಲಿ ಸರ್ಕಾರವನ್ನು ಸಮರ್ಥಿಸಿಕೊಳ್ಳುವ ನಿಟ್ಟಿನಲ್ಲಿ ಸಚಿವರಿಗೆ ಸಲಹೆ ನೀಡಲಿದ್ದಾರೆ.
ಡಿಕೆಶಿ ಸಂಪುಟದಲ್ಲಿ ಖಾತೆ ಹಂಚಿಕೆ; ಸಚಿವರ ಸಭೆ ಕರೆದ ಸಿಎಂ
Source: Prajavani