ಕಾವೇರಿ ನೀರು, ಮೇಕೆದಾಟು, ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆಗಳಿಗೆ ಒತ್ತಾಯಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಕರ್ನಾಟಕ ಬಂದ್ ನಡೆಯುತ್ತಿದೆ. ಬಂದ್ಗೆ ಸೀಮಿತ ಬೆಂಬಲ ಸಿಕ್ಕಿದ್ದು, ಬಿಎಂಟಿಸಿ, ಖಾಸಗಿ ಬಸ್ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಆಸ್ಪತ್ರೆ, ಶಾಲಾ-ಕಾಲೇಜು, ಹೋಟೆಲ್ಗಳು ತೆರೆದಿರಲಿವೆ. ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ.
ಕರ್ನಾಟಕ ಬಂದ್: ಬಸ್ ಸಂಚಾರ ಎಂದಿನಂತೆ, ಬಿಗಿ ಪೊಲೀಸ್ ಬಂದೋಬಸ್ತ್
Source: Filmibeat Kannada