ರಾಜ್ಯ ಸರ್ಕಾರಿ ಪಿಂಚಣಿದಾರರಿಗೆ ಸಿಹಿಸುದ್ದಿ ನೀಡಿರುವ ಸಚಿವ ಸಂಪುಟ, ‘ಸಂಧ್ಯಾ ಕಿರಣ’ ನಗದುರಹಿತ ಆರೋಗ್ಯ ಯೋಜನೆಗೆ ಅನುಮೋದನೆ ನೀಡಿದೆ. ಆರಂಭದಲ್ಲಿ 4.93 ಲಕ್ಷ ಫಲಾನುಭವಿಗಳಿಗೆ ವರ್ಷಕ್ಕೆ 5 ಲಕ್ಷದವರೆಗೆ ಚಿಕಿತ್ಸೆ ಸಿಗಲಿದ್ದು, ಪಿಂಚಣಿದಾರರು ಶೇ.1.25ರಷ್ಟು ವಂತಿಕೆ ಪಾವತಿಸಬೇಕಾಗುತ್ತದೆ. ವಾರ್ಷಿಕ ವೆಚ್ಚ ₹81.75 ಕೋಟಿ ಎಂದು ಅಂದಾಜಿಸಲಾಗಿದೆ.
ಸಂಧ್ಯಾ ಕಿರಣ ಯೋಜನೆಗೆ ಸಚಿವ ಸಂಪುಟ ಅನುಮೋದನೆ
Source: Vishwavani