ಭುವನೇಶ್ವರ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ರದ್ದಾದ ಕಾರಣಕ್ಕೆ ಮಹಿಳೆಯೊಬ್ಬರು ಕೋಪಗೊಂಡು ಮಾನಿಟರ್, ಕೀಬೋರ್ಡ್ ಮತ್ತು ಪಾಸ್ಪೋರ್ಟ್-ಸ್ವೈಪಿಂಗ್ ಯಂತ್ರ ಸೇರಿದಂತೆ ಸುಮಾರು 49,000 ರೂ. ಮೌಲ್ಯದ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ದಾರೆ. ಮಹಿಳೆಯನ್ನು ಮಮೋನಿ ಖರತ್ ಎಂದು ಗುರುತಿಸಲಾಗಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.
ಫ್ಲೈಟ್ ರದ್ದು: ಭುವನೇಶ್ವರ ವಿಮಾನ ನಿಲ್ದಾಣದಲ್ಲಿ ಮಹಿಳೆ ಸಾರ್ವಜನಿಕ ಆಸ್ತಿಗೆ ಹಾನಿ
Source: Vishwavani