ಆಹಾರ ಸಚಿವ ರಿಜ್ವಾನ್ ಅರ್ಷದ್ ಅವರು, ಕೇಂದ್ರದ ಶಂಕಾಸ್ಪದ ಪಟ್ಟಿಯಲ್ಲಿದ್ದ 7.65 ಲಕ್ಷ ಬಿಪಿಎಲ್ ಕಾರ್ಡ್ಗಳ ಪೈಕಿ 3.50 ಲಕ್ಷ ಕಾರ್ಡ್ಗಳನ್ನು ಎಪಿಎಲ್ಗೆ ಪರಿವರ್ತಿಸಲಾಗಿದ್ದು, ಜನರ ಹಿತದೃಷ್ಟಿಯಿಂದ ಉಳಿದ ಪಡಿತರ ಚೀಟಿಗಳ ಪರಿಷ್ಕರಣೆ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಹಣದುಬ್ಬರದ ಹಿನ್ನೆಲೆಯಲ್ಲಿ ಹಳೇ ನಿಯಮಗಳ ಪಾಲನೆ ಕಷ್ಟವಾಗಿರುವುದರಿಂದ ಈ ವಿಷಯವನ್ನು ಕೇಂದ್ರದ ಗಮನಕ್ಕೆ ತರಲಾಗುವುದು ಎಂದು ಹೇಳಿದ್ದಾರೆ.
ಬಿಪಿಎಲ್ ಕಾರ್ಡ್ ರದ್ದತಿ ತಾತ್ಕಾಲಿಕ ಸ್ಥಗಿತ
Source: Asianet Suvarna News