ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕ ಅನಿಸುರ್ ರೆಹಮಾನ್ ಮತ್ತು ಅವರ 24 ವರ್ಷದ ಪುತ್ರ ಅಬು ಸುಫಿಯಾನ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ, ಹರಿತ ಆಯುಧಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಶನಿವಾರ ರಾತ್ರಿ ನಕಾಶಿಪರಾ ಬಳಿ ನಡೆದ ಈ ಘಟನೆ ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ದಾಳಿ ಖಂಡಿಸಿ ನ್ಯಾಯಯುತ ತನಿಖೆ ಆಗ್ರಹಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ನಾಯಕ, ಪುತ್ರನ ಗುಂಡಿಕ್ಕಿ ಹತ್ಯೆ
Source: Vishwavani