ಪ್ರಧಾನಿ ನರೇಂದ್ರ ಮೋದಿ ಅವರ 'ದಿಮಾಗಿ ನಕ್ಸಲ್' ಹೇಳಿಕೆ ವಿವಾದದ ನಡುವೆ ಸಾಮಾಜಿಕ ಜಾಲತಾಣದಲ್ಲಿ 'ದಿಮಾಗಿ ನಕ್ಸಲ್ ಜನತಾ ಪಾರ್ಟಿ' (ಡಿಎನ್ಜೆಪಿ) ಎಂಬ ಹೊಸ ಖಾತೆ ಹುಟ್ಟಿಕೊಂಡಿದ್ದು, ಒಂದೇ ದಿನದಲ್ಲಿ 57,000ಕ್ಕೂ ಹೆಚ್ಚು ಅನುಯಾಯಿಗಳನ್ನು ಪಡೆದುಕೊಂಡಿದೆ. ಯೂಟ್ಯೂಬರ್ ಧ್ರುವ್ ರಾಠಿ ಸೇರಿದಂತೆ ಹಲವು ಪ್ರಮುಖರು ಈ ಖಾತೆಯನ್ನು ಅನುಸರಿಸುತ್ತಿದ್ದಾರೆ. ಈ ಖಾತೆ ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಅರವಿಂದ್ ಕೇಜ್ರಿವಾಲ್ ಮುಂತಾದವರನ್ನು ಅನುಸರಿಸುತ್ತಿದೆ.
ಪ್ರಧಾನಿಯ 'ದಿಮಾಗಿ ನಕ್ಸಲ್' ಹೇಳಿಕೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹೊಸ ಖಾತೆಗೆ ಭಾರೀ ಬೆಂಬಲ
Source: Bhatkallys