ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಬಿಡದಿ ಟೌನ್ಶಿಪ್ ವಿರೋಧಿಸಿ ಬಹಿರಂಗ ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಯೋಗ್ಯ ಮತ್ತು ಅರ್ಹ ವ್ಯಕ್ತಿಗೆ ಅವಕಾಶ ಸಿಕ್ಕಾಗ ಪಟ್ಟಾಭಿಷೇಕ ತಾನಾಗಿಯೇ ಆಗುತ್ತದೆ ಎಂದು ಹೇಳಿದ್ದಾರೆ. ರೈತರ ರಕ್ಷಣೆಗಾಗಿ ಹೋರಾಟ ಮುಂದುವರಿಸುವುದಾಗಿ ಭರವಸೆ ನೀಡಿದ್ದಾರೆ.
ಬಿಡದಿ ಟೌನ್ಶಿಪ್ ವಿರೋಧಿಸಿ ನಿಖಿಲ್ ಕುಮಾರಸ್ವಾಮಿ ಹೋರಾಟದ ಘೋಷಣೆ
Source: OneIndia Kannada