ಸರ್ಕಾರವು ಸಂಧ್ಯಾ ಸುರಕ್ಷಾ, ವಿಧವಾ ವೇತನ ಸೇರಿದಂತೆ ಸಾಮಾಜಿಕ ಭದ್ರತಾ ಪಿಂಚಣಿದಾರರ ವಾರ್ಷಿಕ ಆದಾಯ ಮಿತಿಯನ್ನು ₹32,000 ದಿಂದ ₹1.20 ಲಕ್ಷಕ್ಕೆ ಏರಿಸಿದೆ. ದಾಖಲೆಗಳ ಕೊರತೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ 17 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಇದರಿಂದ ಅನುಕೂಲವಾಗಲಿದ್ದು, ಅರ್ಹರ ಪಿಂಚಣಿ ಮುಂದುವರಿಸಲು ಸೂಚಿಸಲಾಗಿದೆ.
ಪಿಂಚಣಿ ಆದಾಯ ಮಿತಿ ₹1.20 ಲಕ್ಷಕ್ಕೆ ಹೆಚ್ಚಳ
Source: Vishwavani