ವಿಶಾಖಪಟ್ಟಣದ ಖಾಸಗಿ ಶಾಲೆಯೊಂದರಲ್ಲಿ ಹೋಮ್‌ವರ್ಕ್ ಪೂರ್ಣಗೊಳಿಸದ ಕಾರಣಕ್ಕೆ ಶಿಕ್ಷಕಿ ಕಪಾಳಮೋಕ್ಷ ಮಾಡಿದ್ದರಿಂದ 6 ವರ್ಷದ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಶಿಕ್ಷಕಿ ಮಗುವಿಗೆ ಗದರಿಸಿ ಪೆಟ್ಟು ಕೊಟ್ಟ ಕೆಲವೇ ಸೆಕೆಂಡುಗಳಲ್ಲಿ ಮಗು ಕುಸಿದು ಬಿದ್ದಿರುವುದು ಕಂಡುಬಂದಿದೆ. ಆಸ್ಪತ್ರೆಗೆ ಕರೆತರುವಷ್ಟರಲ್ಲೇ ಮಗು ಮೃತಪಟ್ಟಿದ್ದು, ಪೊಲೀಸರು ಸಿಸಿಟಿವಿ ಮತ್ತು ಸಾಕ್ಷ್ಯಾಧಾರಗಳನ್ನು ಪರಿಶೀಲಿಸುತ್ತಿದ್ದಾರೆ.
ಹೋಮ್‌ವರ್ಕ್ ಮಾಡದ ಕಾರಣಕ್ಕೆ ಶಿಕ್ಷಕಿ ಹೊಡೆದ ಪರಿಣಾಮ 6 ವರ್ಷದ ಬಾಲಕ ಸಾವು
Source: TV9 Kannada