ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ಖಾಸಗಿ ಕಾರನ್ನು ತಡೆದು ಪರಿಶೀಲಿಸಿದ ಪೊಲೀಸರು, ಕಾರಿನಲ್ಲಿ 9 ಕೋಟಿ ರೂಪಾಯಿ ನಗದು ಪತ್ತೆ ಮಾಡಿದ್ದಾರೆ. ಆದಾಯ ತೆರಿಗೆ ಇಲಾಖೆ ಮಾಹಿತಿ ಮೇರೆಗೆ ನಡೆದ ಕಾರ್ಯಾಚರಣೆಯಲ್ಲಿ ಸಚಿನ್ ಎಂಬಾತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ನಂತರ ಆತನ ಮನೆಯಲ್ಲಿ 1.3 ಕೋಟಿ ರೂಪಾಯಿ ನಗದು ಪತ್ತೆಯಾಗಿದ್ದು, ಒಟ್ಟು 10.3 ಕೋಟಿ ರೂಪಾಯಿ ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರಿನಲ್ಲಿ ಕಾರಿನಲ್ಲಿ 9 ಕೋಟಿ ನಗದು ಪತ್ತೆ
Source: Zee Kannada News